August 5, 2025
WhatsApp-Image-2025-05-27-at-5.17.25-PM-300x164-1

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣದ ಸಂಬಂಧವಾಗಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ ಈ ಪ್ರಕರಣದಲ್ಲಿ ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಮತ್ತು ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಹಾಗೇ ಈಗಾಗಲೇ, ಪೊಲೀಸರು ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್ ಪೂಜಾರಿ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ನಿವಾಸಿ ಪೃಥ್ವಿರಾಜ್ ಜೋಗಿ (21) ಮತ್ತು ಚಿಂತನ್ ಬೆಳ್ಳಡ (19) ಅವರನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!