April 29, 2025
2025-02-18 at 10.47.05 AM

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.

ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!