
ಉಡುಪಿ: 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಉಡುಪಿಯಲ್ಲಿ ಹಠಾತ್ ಕುಸಿದು ಬಿದ್ದು ಮೃತಪಟ್ಟ ದುಃಖದ ಘಟನೆ ನಡೆದಿದೆ.
ಮೃತ ಬಾಲಕನನ್ನು ರ್ಯಾನ್ಸ್ ಕ್ಯಾಥಲ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಅವನು ಉಡುಪಿಯ ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದ.
ಜುಲೈ 15, ಮಂಗಳವಾರ ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಇದ್ದಕ್ಕಿದ್ದಂತೆ ಕುಸಿದುಬಿದ್ದನು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ.
ರ್ಯಾನ್ಸ್ ತೊಟ್ಟಂನ ನಿವಾಸಿಗಳಾದ ಅಶ್ವಿನ್ ಮತ್ತು ಸರಿತಾ ಡಿ’ಸೋಜಾ ದಂಪತಿಯ ಪುತ್ರನಾಗಿದ್ದ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಈಗ ಹಿರಿಯರಷ್ಟೇ ಅಲ್ಲ, ಕಿರಿಯರೂ ಸಹ ಇದಕ್ಕೆ ಬಲಿಯಾಗುತ್ತಿದ್ದಾರೆ.