August 6, 2025
Screenshot_20250505_1058572-640x373

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯಕ್ಕಾಗಿ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚರಣ್ ರಾಜ್, ಹರ್ಷವರ್ಧನ್, ವಿನಯ್ ಮತ್ತು ವೆಂಕಟಸಾಯಿ ಕಿರಣ್ ಎಂದು ಗುರುತಿಸಲಾಗಿದೆ. ಅವರಿಂದ 38,400 ರೂ. ಮೌಲ್ಯದ 32 ಟಿಕೆಟ್‌ಗಳು, 1 ಮೊಬೈಲ್ ಫೋನ್ ಹಾಗೂ 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯಕ್ಕೆ ಎಲ್ಲ ಕಾಲದಲ್ಲೂ ಹೆಚ್ಚಿನ ಬೇಡಿಕೆ ಇರುವ ಕಾರಣ, ಆರೋಪಿಗಳು 1200 ರೂ. ಮೌಲ್ಯದ ಟಿಕೆಟ್‌ಗಳನ್ನು 5,000 ರಿಂದ 10,000 ರೂ. ವರೆಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸಿಸಿಬಿ ವಿಶೇಷ ತಂಡ, ಖರೀದಿದಾರರ ರೂಪದಲ್ಲಿ ಹೋಗಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿತು.

ಈ ಘಟನೆ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!