August 5, 2025
karnatakarainforecastfp-1719817785

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಿದ್ದು, ಮುಂದಿನ ಒಂದು ವಾರದವರೆಗೆ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೂನ್ 23ರಿಂದ ಜೂನ್ 29ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಹಲವೆಡೆ ಜೂನ್ 23ರಿಂದ ಜೂನ್ 29ರವರೆಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲೂ ಈ ಅವಧಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!