April 2, 2025
kunda

ಉಡುಪಿ: ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ಸರ್ಕಾರಿ ಸೇವೆಯಿಂದ ತಕ್ಷಣದಿಂದಲೇ ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರನ್ನು ಉಪ ವಿಭಾಗಾಧಿಕಾರಿ ಹುದ್ದೆಯ ತಾತ್ಕಾಲಿಕ ಪ್ರಭಾರ ವಹಿಸುವಂತೆ ಸೂಚಿಸಲಾಗಿದೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ, ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣ ಸಂಬಂಧಿತ ಭೂ ಬಳಕೆ ಪರಿವರ್ತನೆಗೆ ಸಂಬಂಧಿಸಿದ ಕಡತದಲ್ಲಿ ನಿಯಮ ಉಲ್ಲಂಘನೆಯು ನಡೆದಿರುವುದು ಉಲ್ಲೇಖಿಸಲಾಗಿದೆ. ಉದ್ಯಾನ ಮತ್ತು ಬಯಲು ಜಾಗವನ್ನು ವಾಣಿಜ್ಯ ವಲಯಕ್ಕೆ ಪರಿವರ್ತಿಸುವುದಕ್ಕೆ ಸಂಬಂಧಿಸಿದ ದಾಖಲೆಗಳು, ಸರ್ವೇ ನಕ್ಷೆ ಮತ್ತು ಇತರ ದಾಖಲೆಗಳು ಕಾನೂನು ನಿಯಮಗಳನ್ನು ಮೀರಿ ತಯಾರಿಸಲಾಗಿರುವುದು, ಈ ಕುರಿತು ಉಡುಪಿ ಶಾಸಕರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು.

ಈ ಪ್ರಕರಣ ಸಂಬಂಧ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು, ಆದರೆ ಅವರ ಸಮಜಾಯಿಷಿ ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಅನ್ವಯಿಸಿ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್. ಅವರನ್ನು ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

error: Content is protected !!