
ರಾಜ್ಯದಲ್ಲಿ ಮಳೆ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಜೂನ್ 11ರಿಂದ 14ರವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಜೂನ್ 12ರಿಂದ 14ರವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 12ರಿಂದ 15ರವರೆಗೆ ಅತೀ ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪಟ್ಟೀಲ್ ಅವರು ನೀಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಸಿಯಾರ್‌ಝೋನ್ (CYCLONIC CIRCULATION ZONE) 15 ಡಿಗ್ರಿ ಉತ್ತರ ಅಕ್ಷಾಂಶದ ಉದ್ದಕ್ಕೂ 3.1 ಕಿ.ಮೀ ರಿಂದ 5.1 ಕಿ.ಮೀ ಎತ್ತರದ ನಡುವೆ ಹರಡಿದೆ. ಇದರ ಪರಿಣಾಮವಾಗಿ ಜೂನ್ 11ರಂದು ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಜೂನ್ 12ರಿಂದ 16ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ನಿರೀಕ್ಷಿಸಲಾಗಿದೆ. ಮಳೆಯ ವೇಳೆ ಗಾಳಿಯ ವೇಗವು ಸುಮಾರು 50 ಕಿ.ಮೀ ಆಗಿರಬಹುದು ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತೀವೃಷ್ಟಿ ಸಂಭವಿಸಬಹುದು.