
ಕುಂದಾಪುರ: ಫೆರಿ ರಸ್ತೆಯ ಪಾರ್ಕ್ ಸಮೀಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ಅವರು ದಾಳಿ ನಡೆಸಿದ್ದು, ನಗದು ಮತ್ತು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ ಸತೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಕಾಸ್ ಅಕಾ ವಿಕ್ಕಿ ಹಾಗೂ ವಿವೇಕ ಎಂಬ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಹಿಮಾಚಲ ಪ್ರದೇಶದ ಧರ್ಮಶಾಲಾ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಪಂಚಾಬ್ ಕಿಂಗ್ಸ್ ಮತ್ತು ಲಕ್ನೋ ತಂಡಗಳ ನಡುವಿನ ಟಿ20 ಪಂದ್ಯವನ್ನು ಆಧರಿಸಿ, ‘ಪಾರ್ಕರ್’ ಎಂಬ ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮುಖಾಂತರ ಆನ್‌ಲೈನ್ ಬೆಟ್ಟಿಂಗ್ ನಡೆಯುತ್ತಿತ್ತು. ಪೊಲೀಸರು 4,700 ರೂ. ನಗದು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.