
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಡುಪುವಿನಲ್ಲಿ ನಡೆದ ಗುಂಪು ಹಲ್ಲೆ ಪ್ರಕರಣದಲ್ಲಿ ಅಶ್ರಫ್ ಎಂಬುವವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಕೇರಳದ ವಯನಾಡು ಮೂಲದ ಅಶ್ರಫ್ ಅವರು, ಎಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಭಾಗದ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯವಿಲ್ಲೆ ನಡೆದ ಗುಂಪು ದಾಳಿಯಲ್ಲಿ ಹತ್ಯೆಗೀಡಾಗಿದ್ದರು.
ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಅವರಲ್ಲಿ ಐವರು ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯ ವೇಳೆ ಸರ್ಕಾರಿ ಪರದ ವಿಶೇಷ ಅಭಿಯೋಜಕರು ವಾದ ಮಂಡಿಸಿದ್ದು, ಆರೋಪಿಗಳಿಗೆ ಜಾಮೀನು ಲಭಿಸದೆ ವಿಚಾರಣೆ ಮುಂದೂಡಲಾಗಿದೆ.