August 6, 2025
Screenshot_20250505_1200152-640x348

ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯ ಬಳಿಯ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ರಾತ್ರಿ 8 ಗಂಟೆಗೆ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಹಲವರು ಗಾಯಗೊಂಡ ಘಟನೆ ನಡೆದಿದೆ.

ಮಾರುತಿ ಓಮಿನಿ ಕಾರಿನಲ್ಲಿ ಮಡಿಕೇರಿಯಲ್ಲಿ ಕೆಲಸ ಮಾಡುತ್ತಿರುವ ಶರೀಫ್ ಕುಟುಂಬದೊಂದಿಗೆ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಂದರ್ಭದಲ್ಲಿ ಆನೆಕಾಡು ಬಳಿ ಕಾಡಾನೆ ದಾಳಿ ನಡೆಸಿದೆ.

ಆನೆ ದಾಳಿಯಿಂದ ಕಾರು ನಜ್ಜುಗುಜ್ಜಾಗಿದ್ದು ಗಾಯಾಳುಗಳು ಕುಶಾಲನಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಸುಂಟಿಕೊಪ್ಪದ ಲತೀಫ್ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

error: Content is protected !!