August 5, 2025
image-37-1068x801-1

ಸಂಪಾಜೆ: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವರದಿಯಾಗಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು (ನಂಬರ್: ಕೆಎ 05 ಎಂಎಫ್ 5555) ಮಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಲ್ಲಿ ಇಬ್ಬರು ಅಪಘಾತ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಇಬ್ಬರನ್ನು ತುರ್ತು ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರು ಕೊಡಗು ಜಿಲ್ಲೆಯ ಗೋಣಿಕೊಪ್ಪೆ ಮೂಲದ್ದಾಗಿದ್ದು, ಮೃತರೆಲ್ಲರೂ ಒಂದೇ ಊರಿಗೆ ಸೇರಿದವರು ಎಂಬ ಮಾಹಿತಿ ಲಭಿಸಿದೆ.

ಘಟನೆಯು ಅಪಾರ ದುಃಖಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಸಂಬಂಧಿಕರಲ್ಲಿ ಶೋಕದ ಛಾಯೆ ಮೂಡಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಮುಂದಾಗಿದ್ದಾರೆ. ಟಿಪ್ಪರ್ ಚಾಲಕನ ತೀವ್ರ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆದಿದೆ.

error: Content is protected !!