August 6, 2025
IMG-20250611-WA0025

ಉಡುಪಿ ಜಿಲ್ಲೆಯ ಎಸ್ಪಿ ಅರುಣ್ ಕುಮಾರ್ ಅವರು ಕೋಳಿ ಅಂಕಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿದ್ದರೆ, ಈಗ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಅದೇ ರೀತಿಯ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆನೇರಂಕಿ ಗ್ರಾಮದ ನೇರಂಕಿ ಎಂಬ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ, ಪೋಲಿಸ್ ಉಪನಿರೀಕ್ಷಕ ಅಭಿನಂದನ್ ನೇತೃತ್ವದಲ್ಲಿ ಪೊಲೀಸ್ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಹಣ ಪಣವಾಗಿ ಇಟ್ಟು ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ಅಷ್ಟರಲ್ಲಿ 08 ಜನರು ಪರಾರಿಯಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಘಟನಾ ಸ್ಥಳದಿಂದ 06 ದ್ವಿಚಕ್ರ ವಾಹನಗಳು, 02 ಕಾರುಗಳು, 4 ಕೋಳಿಗಳು, ಕೋಳಿ ಅಂಕಕ್ಕೆ ಬಳಸಿದ್ದ ಕತ್ತಿ ಹಾಗೂ ನಗದು ರೂ. 3,560 ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಂ. 44/2025, ಕಲಂ 87, 93 KP Act ಹಾಗೂ 3, 11 ಪ್ರಾಣಿ ಕ್ರೌರ್ಯ ತಡೆ ಕಾಯ್ದೆ, 1960 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

error: Content is protected !!