
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಅಗಸೂರು ಬಳಿ ಜುಲೈ 21 ರಂದು (ಸೋಮವಾರ) ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್‌ವು ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದ್ದು, ಪರಿಣಾಮವಾಗಿ 18ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ.