
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬೀಳಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರ ಬಿದ್ದ ಪರಿಣಾಮ ಮನೆಯ ಒಂದು ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಗೃಹಪಯೋಗಿ ಸಾಮಗ್ರಿಗಳು ನಾಶವಾಗಿವೆ. ಘಟನೆಯ ಸಮಯದಲ್ಲಿ ಮನೆಯೊಳಗೆ ಪ್ರೇಮಾ ಎಂಬ ಮಹಿಳೆ ಇದ್ದರು. ತೀವ್ರ ಗಾಳಿಯ ಸದ್ದು ಹಾಗೂ ಮರ ಬೀಳುವ ಶಬ್ದ ಕೇಳಿ ಆತಂಕಗೊಂಡು ಹೊರ ಓಡುವಾಗ ಮರದ ಒಂದು ಬೃಹತ್ ಕೊಂಬೆ ಅವರ ಮೇಲೆ ಬಿದ್ದು ಗಾಯವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರು ಕೂಡ ಕೂಡಲೆ ಅವರು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದಾರೆ. ಈ ಅಪಘಾತದಿಂದಾಗಿ ಮನೆಗೆ ಬೃಹತ್ ಪ್ರಮಾಣದಲ್ಲಿ ಹಾನಿಯಾಗಿದೆ. ಪರಿಸ್ಥಿತಿ ಬಗೆಹರಿಸಲು ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ಕ್ರಮ ಕೈಗೊಳ್ಳಲು ಕ್ರಮ ಜರಗಿಸಲಾಗುತ್ತಿದೆ. ಸದ್ಯ ಪ್ರೇಮಾ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.