August 6, 2025
images

ಮೈಸೂರು: ಧರ್ಮಸ್ಥಳದಲ್ಲಿ ಸಂಭವಿಸಿರಬಹುದಾದ ಮಹಿಳೆಯರ ಮೇಲಿನ ಹಲ್ಲೆ, ಅತ್ಯಾಚಾರ, ಕೊಲೆ ಹಾಗೂ ನಾಪತ್ತೆ ಪ್ರಕರಣಗಳ ಸಂಪೂರ್ಣ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಧರ್ಮಸ್ಥಳದಲ್ಲಿ ಪತ್ತೆಯಾದ ಅಪರಿಚಿತ ಶವದ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ರಚನೆ ಕುರಿತು ಪ್ರಶ್ನೆ ಎದುರಾದಾಗ, “ಸದ್ಯಕ್ಕೆ ಯಾವುದೇ ಎಸ್‌ಐಟಿ ರಚನೆ ಮಾಡುವ ಯೋಚನೆ ಇಲ್ಲ,” ಎಂದು ಸ್ಪಷ್ಟಪಡಿಸಿದರು.

ತಲೆಬುರುಡೆ ಪತ್ತೆಯಾಗಿರುವ ಘಟನೆ ಮತ್ತು ನಾಪತ್ತೆಯ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ.
ಜುಲೈ 12ರಂದು ಮಾಧ್ಯಮಗಳಲ್ಲಿ ವರದಿಯಾಗಿರುವ ಮಾಹಿತಿಯ ಪ್ರಕಾರ, ತಲೆಬುರುಡೆ ಪತ್ತೆಯಾದ ಘಟನೆ ಮತ್ತು ವೈದ್ಯಕೀಯ ವಿದ್ಯಾರ್ಥಿನಿಯ ನಾಪತ್ತೆ ಬಗ್ಗೆ ಕುಟುಂಬದವರು ನೀಡಿರುವ ಹೇಳಿಕೆಗಳು ಗಮನ ಸೆಳೆದಿವೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಹಲವಾರು ಪೊಲೀಸ್ ಠಾಣೆಗಳು ಈವರೆಗೆ ನಾಪತ್ತೆ ಹಾಗೂ ಸಾವು ಪ್ರಕರಣಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂಬ ಗಂಭೀರ ಆರೋಪಗಳನ್ನೂ ಗಮನಕ್ಕೆ ತಂದಿದೆ.

ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವರದಿಯಾಗಿರುವ ಮಹಿಳೆಯರ ನಾಪತ್ತೆ, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆ ನಡೆಯಬೇಕಿದ್ದು, ಇದಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆಯ ಅಗತ್ಯವಿದೆ ಎಂದು ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

error: Content is protected !!