
ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ದುಃಖದ ಘಟನೆ ನಡೆದಿದೆ. 16 ವರ್ಷದ ಬಾಲಕ ಪ್ರಥಮ್, ಆಟವಾಡುತ್ತಿರುವ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅವನು ಗೋವಿಂದ ಗೌಡರ ಪುತ್ರನೆಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಆಟವಾಡುತ್ತಿರುವಾಗ ಪ್ರಥಮ್‌ಗೆ ತೀವ್ರ ಎದೆನೋವು ಸಂಭವಿಸಿದ್ದು, ತಕ್ಷಣವೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆ ಸೇರುವಾಗಲೇ ಅವನು ಮೃತಪಟ್ಟಿರುವುದು ವೈದ್ಯರಿಂದ ದೃಢಪಟ್ಟಿದೆ.
ಪರೀಕ್ಷೆಗಾಗಿ ಪ್ರಥಮ್‌ನ ಶವವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕಳಿಸಲಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಾಗಿದೆ.