
ಧರ್ಮಸ್ಥಳ ದೂರು ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನೊಂದಿಗೆ ಜುಲೈ 28 ರಂದು ಸ್ಥಳ ಮಹಜರು ನಡೆಸಲಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ. ಸೈಮನ್ ಬೆಳ್ತಂಗಡಿಗೆ ಆಗಮಿಸಿದ್ದು, ಅವರು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಳಿರುವ ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಜೊತೆ ಮಹಜರಿನ ತಯಾರಿಯಲ್ಲಿ ತೊಡಗಿದ್ದಾರೆ.
ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದ ನಂತರ ದೂರುದಾರನನ್ನು ಕರೆಸಿ, ಕೆಲವು ದಾಖಲೆಗಳಲ್ಲಿ ಸಹಿ ಪಡೆದು ನಂತರ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದ ಸಂಬಂಧಿತ ಸ್ಥಳಕ್ಕೆ ತೆರಳಿ ಮಹಜರು ನಡೆಸಲಿದ್ದಾರೆ.
ಈ ಕಾರ್ಯಾಚರಣೆಗೆ ಕಂದಾಯ ಇಲಾಖೆ, ಸರ್ವೆ ಇಲಾಖೆ, ಅಂತರಿಕ ಭದ್ರತಾ ವಿಭಾಗ (ISD), ಎಫ್.ಎಸ್.ಎಲ್ ವಿಭಾಗದ ಸೋಕೋ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸಜ್ಜಾಗಿದೆ.