
ಧರ್ಮಸ್ಥಳ:
ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸುಳ್ಳು ಮಾಹಿತಿಗಳನ್ನು ಯೂಟ್ಯೂಬ್ ಮೂಲಕ ಹರಡಿದ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರನು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿರುವುದಾಗಿ ನ್ಯಾಯಾಲಯದ ಮುಂದೆ ಸಾಕ್ಷ್ಯ ನೀಡಿದ್ದ ಹಿನ್ನೆಲೆಯಲ್ಲಿ, ಈ ಪ್ರಕರಣದ ಕುರಿತು ಸಮೀರ್ ಎಂ.ಡಿ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ರಚಿಸಿದ ಹಾಗೂ ಸುಳ್ಳು ಮಾಹಿತಿಗಳಿಂದ ಕೂಡಿರುವ ವಿಡಿಯೋವನ್ನು ಪ್ರಕಟಿಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಹಾಗೂ ಸಾರ್ವಜನಿಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಲು ಈ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ ಎಂಬ ಆರೋಪವೂ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.