
ನಿಟ್ಟೆಯಲ್ಲಿ ಮಾರ್ಚ್ 19 ರಂದು ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ನಿಟ್ಟೆ ಬೊರ್ಗಲ್ ಗುಡ್ಡೆ ನಿವಾಸಿ ಅಮ್ಮಬ್ಬನಾಗಿದ್ದು, ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದನು. ಬಾಲಕಿಯ ಮನೆಯ ಸಮೀಪ ಈತ ಅವಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ, ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.