
ಬೆಳಗಾವಿ ಜಿಲ್ಲೆಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಬೇಸತ್ತ ಗಂಡಾತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ತನ್ನದೇ ಕಂಪ್ಯೂಟರ್ ಅಂಗಡಿಯೊಳಗೆ ವೈಯರ್ ಬಳಸಿ ನೇಣುಬಿಗಿದುಕೊಂಡು ಸುನೀಲ್ ಮೂಲಿಮಣಿ (33) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಅವರು ಡೆತ್ ನೋಟೊಂದನ್ನು ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಪತ್ನಿಯೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಸುನೀಲ್ ನಾಲ್ಕು ವರ್ಷಗಳ ಹಿಂದೆ ಪೂಜಾ ಎಂಬ ಮಹಿಳೆಯನ್ನು ವಿವಾಹವಾಗಿದ್ದರು. ದಂಪತಿಗೆ ಮೂರು ವರ್ಷದ ಮಗು ಕೂಡಾ ಇದೆ.
ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 108ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.