
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಮಗಳು, ಮಂಗಳೂರಿನಲ್ಲಿ ಪಶುವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಹಾಕಿಕೊಂಡು ಪ್ರಾಣತ್ಯಾಗ ಮಾಡಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಪಶುವೈದ್ಯಕೀಯದಲ್ಲಿ ಎಂ.ಡಿ. ಪದವಿ ಪಡೆದಿದ್ದ ಡಾ. ಕೀರ್ತನಾ ಜೋಶಿ ಪುತ್ತೂರು, ಕೊಯಿಲ ಮತ್ತು ಮಂಗಳೂರಿನಲ್ಲಿ ಖಾಸಗಿ ವೈದ್ಯರಾಗಿ ಕೆಲಸ ಮಾಡಿದ್ದರು. ಸೋಮವಾರ ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ನೇಣುಹಾಕಿಕೊಂಡಿದ್ದು ನಂತರ ಮರಣ ಹೊಂದಿದ್ದಾರೆ.
ಕೀರ್ತನಾ ಜೋಶಿ ಅವರ ದೇಹವನ್ನು ಪುತ್ತೂರಿನ ಸ್ವಗೃಹಕ್ಕೆ ತರಲಾಗಿ ಅಂತ್ಯಸಂಸ್ಕಾರ ನಡೆಸಲಾಯಿತು. ಅವರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ ಮತ್ತು ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಹಿಂದೆ ಬಿಟ್ಟು ಹೋಗಿದ್ದಾರೆ.