
ಪುತ್ತೂರಿನಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿದ ನಂತರ ಯುವತಿಯನ್ನು ಗರ್ಭವತಿಯಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗರ್ಭಿಣಿಯಾದ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣದಲ್ಲಿ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಆರೋಪದಡಿ ಪ್ರಕರಣ ಈಗಾಗಲೇ ದಾಖಲಾಗಿದೆ. ಪ್ರಕರಣ ದಾಖಲಾಗಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಸಂತ್ರಸ್ತೆ (21) ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಮಂಗಳೂರಿನ ಒಂದು ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದಾರೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.