August 7, 2025
belkale temple

ಉಡುಪಿ: ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ ಸಮಾರಂಭ ಬುಧವಾರ ನೆರವೇರಿತು.

ಗ್ರಾಮ ಆಡಳಿತಾಧಿಕಾರಿ ಪವಿತ್ರ ಅವರು ಹೊಸ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಸಮಿತಿಯ ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಅರ್ಚಕರಾಗಿ ಗೋಪಾಲಕೃಷ್ಣ ಭಟ್, ಮತ್ತು ಸದಸ್ಯರಾಗಿ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ್ ಅಂಚನ್, ಸತೀಶ್, ಮಮತಾ ಶೆಟ್ಟಿ, ಹಾಗೂ ಅನುಷಾ ಅವರು ಅಧಿಕಾರ ಸ್ವೀಕರಿಸಿದರು.

ಈ ಕಾರ್ಯಕ್ರಮಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಪ್ಪೂರು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸುವರ್ಣ, ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ನಾಯ್ಕ್, ಗ್ರಾಮ ಪಂಚಾಯಿತಿ ಸದಸ್ಯರು ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್, ಶರತ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಜ್ಜನ್ ಶೆಟ್ಟಿ, ಶಿರೀಷ್ ಶೆಟ್ಟಿ, ತಕ್ಷಕ್ ಪೈ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭ, ನೂತನ ಸಮಿತಿಯ ಸದಸ್ಯರಿಗೆ ಶುಭ ಹಾರೈಸಿ, ದೇವಾಲಯದ ಸುಗಮ ಕಾರ್ಯನಿರ್ವಹಣೆಗೆ ಶುಭಾಶಯ ಕೋರಲಾಯಿತು.

error: Content is protected !!