August 6, 2025
IMG-20250713-WA0349-640x734

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತೆ ಮಹಿಳೆಯೊಬ್ಬರು ತಾಯಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

ಕೊಯ್ಯೂರು ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯ (32) ಅವರು ನಿನ್ನೆ ಮಧ್ಯಾಹ್ನ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲೇ ಕೊಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ರಮ್ಯ ಅವರು ಸುಮಾರು ಎರಡು ವರ್ಷಗಳ ಹಿಂದೆ ಪಾದಡ್ಕ ನಿವಾಸಿ ಲತೀಶ್ ಎಂಬವರೊಂದಿಗೆ ವಿವಾಹವಾಗಿದ್ದರು. ಅವರು ಬೆಳ್ತಂಗಡಿಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಆರೋಗ್ಯ ಸಮಸ್ಯೆಯಿಂದ ಮಾನಸಿಕ ತೀವ್ರ ಒತ್ತಡಕ್ಕೆ ಒಳಗಾಗಿ ರಮ್ಯ ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಹಾಗೂ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!