
ಶುಕ್ರವಾರ ತಡರಾತ್ರಿಯಲ್ಲಿ ನಾರಾವಿ ಕುತ್ಲೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಇಬ್ಬರೂ ರಾತ್ರಿ ಒಂದು ಕಾರ್ಯಕ್ರಮ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ, ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷಗುಡ್ಡೆ ಸಮೀಪದ ಕೊಕ್ರಾಡಿ–ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿರುವ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತಕ್ಷಣವೇ ವೇಣೂರು ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.