
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿನ ಸ್ಟೇಟ್ ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ.
ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿ ಈ ಅವಘಡ ನಡೆದಿದೆ. ಮಾಹಿತಿ ದೊರಕಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ನಡೆಸಿದರು.
ಈ ಬೆಂಕಿಯಿಂದ ಮನೆಯಲ್ಲಿ ಇದ್ದ ಸೋಫಾ ಮತ್ತು ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟುಹೋದವು ಎಂದು ತಿಳಿದುಬಂದಿದೆ.
ಈ ಮನೆಗೆ ವಿದ್ಯಾರ್ಥಿಗಳು ಬಾಡಿಗೆಗೆ ತಂಗಿದ್ದು, ಭಾಗ್ಯವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಹೀಟರ್ ಉಪಯೋಗಿಸುವ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದಿರಬಹುದೆಂದು ಶಂಕಿಸಲಾಗಿದೆ.
ಮನೆ ಮತ್ತು ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕಾರಣದಿಂದ ಅಗ್ನಿಶಾಮಕ ಸಿಬ್ಬಂದಿ ಆಕ್ಸಿಜನ್ ಮಾಸ್ಕ್ ಹಾಗೂ ಸಿಲಿಂಡರ್‌ಗಳ ನೆರವಿನಿಂದ ಕಾರ್ಯಾಚರಣೆ ನಡೆಸಿ, ಫ್ಯಾನ್‌ಗಳನ್ನು ಬಳಸಿಕೊಂಡು ಹೊಗೆಯನ್ನು ಹೊರಗೆ ಬಿಡಲಾಯಿತು.
ಬೆಂಕಿಯಿಂದ ಸುಮಾರು ರೂ. 75,000 ಮೊತ್ತದ ಆಸ್ತಿಯ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.