
ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ, ಇದು ಇತ್ತೀಚೆಗೆ ಮೀರತ್‌ನಲ್ಲಿ ನಡೆದ ಸೌರಭ್ ರಜಪೂತ್ ಕೊಲೆಯನ್ನು ಹೋಲಿಸುತ್ತದೆ. ಮದುವೆಯಾದ ಕೇವಲ 15 ದಿನಗಳಲ್ಲಿ ಪತ್ನಿಯು ತನ್ನ ಪತಿಯನ್ನು ಕೊಲ್ಲಲು 2 ಲಕ್ಷ ರೂ.ಗೆ ಸುಪಾರಿ ನೀಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಕೃತ್ಯದಲ್ಲಿ ಭಾಗಿಯಾದ ಪತ್ನಿ, ಆಕೆಯ ಪ್ರಿಯಕರ ಮತ್ತು ಸುಪಾರಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಹಾರ್ ಪೊಲೀಸ್ ಠಾಣೆಯ ಅಧಿಕಾರಿ ಪಂಕಜ್ ಮಿಶ್ರಾ ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 19ರಂದು ಹೊಲವೊಂದರಲ್ಲಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದರು. ಅವರನ್ನು ತಕ್ಷಣವೇ ಬಿಧುನಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಈ ಬಗ್ಗೆ ಅವರ ಕುಟುಂಬದವರಿಗೆ ಮಾಹಿತಿ ನೀಡಲಾಯಿತು.