
ಉಡುಪಿ ವಿಧಾನಸಭಾ ಕ್ಷೇತ್ರದ ಮಾಯಾಡಿ ಕೊಳಲಗಿರಿ ನಿವಾಸಿ ಹಾಗೂ 45 ವರ್ಷದ ಬಿಜೆಪಿ ಸಕ್ರಿಯ ಕಾರ್ಯಕರ್ತ ಮಿಲ್ಟನ್ ಡಿಸೋಜ ಅವರ ನಿಧನದ ಸುದ್ದಿ ಅವರಿಗೆ ಪರಿಚಿತ ಸರ್ಕಾರಿ ಹಾಗೂ ಪಕ್ಷದ ವರಿಷ್ಠರಲ್ಲಿ ದುಃಖದ ಛಾಯೆ ಮೂಡಿಸಿದೆ.
ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು, ಹಲವು ಸಂಘಟನೆಗಳಲ್ಲಿಯೂ ಸಕ್ರಿಯ ಪಾತ್ರವಹಿಸಿದ್ದರು.
ಮಿಲ್ಟನ್ ಡಿಸೋಜರ ಅವಸಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಘಟಕ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದು, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಮುಖಂಡ ಎಂ.ಸಲೀಂ ಅಂಬಾಗಿಲು, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ರುಡಾಲ್ಫ್ ಡಿಸೋಜ ಸೇರಿದಂತೆ ಹಲವು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.