August 3, 2025
karnatakamonsoonrainalert1-1749431501

ಕರ್ನಾಟಕದಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿಕೆ

ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಜ್ಯದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್‌ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ಸಾಮಾನ್ಯವಾಗಿ ಮಳೆಯಾಗುತ್ತಿದೆ. ಕರಾವಳಿಯ ಹೆಚ್ಚಿನ ಭಾಗಗಳಲ್ಲಿಯೂ ಹಾಗೂ ರಾಜ್ಯದ ಒಳನಾಡಿನ ಹಲವೆಡೆ ಮಳೆ ಬೀಳುತ್ತಿದೆ.

ಇಂದು ಕೂಡಾ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯು ಮುಂದುವರಿಯಲಿದೆ. ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮವು ಒಂದು ತಿಂಗಳಲ್ಲಿಯೇ ಮೂರನೇ ಬಾರಿಗೆ ಜಲಾವೃತವಾಗಿದೆ. ಮಳೆ ಏರಿಕೆ ಕಾರಣದಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಹರಿಯುತ್ತಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಇನ್ನೂ ಮುಂದುವರಿಯಲಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳು:
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ:
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು:
ದಕ್ಷಿಣ ಕನ್ನಡ ಭಾಗದ ಹಲವೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!