
ಸೌಜನ್ಯಾ ಪ್ರಕರಣ: ನ್ಯಾಯಾಲಯದ ಆದೇಶ ಉಲ್ಲಂಘನೆ ಹಿನ್ನೆಲೆ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೀಡಾದ ವಿಷಯವೆಂದರೆ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ. ಈ ಪ್ರಕರಣದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶವಿರಿದ್ದರೂ ಸಹ ಎರಡನೇ ವಿಡಿಯೊವನ್ನು ಪ್ರಕಟಿಸಿದ್ದಕ್ಕಾಗಿ ‘ದೂತ’ ಎಂಬ ಯೂಟ್ಯೂಬ್ ಚಾನೆಲ್ ಹಿಂಬಾಲಕ ಸಮೀರ್ ಎಂಡಿ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ಈ ಮೊಕದ್ದಮೆಯನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಅವರು ಸಲ್ಲಿಸಿದ್ದು, ನ್ಯಾಯಾಲಯ ಈಗಾಗಲೇ ಸಮೀರ್ ಎಂಡಿಗೆ ನೋಟಿಸ್ ಜಾರಿಗೊಳಿಸಿದೆ. ಅವರು ಕೋರ್ಟ್ ಎದುರು ಹಾಜರಾಗಬೇಕೆಂದು ಸೂಚಿಸಲಾಗಿದೆ.
ಮುಖ್ಯವಾಗಿ, ನ್ಯಾಯಾಲಯವು ಈ ಹಿಂದೆಯೇ ಸೌಜನ್ಯಾ ಪ್ರಕರಣದ ಕುರಿತು ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಮಾಡಲಾದ ವಿಡಿಯೊ ತೆಗೆದುಹಾಕುವಂತೆ ಮತ್ತು ಭವಿಷ್ಯದಲ್ಲಿ ಇಂಥಹ ವಿಡಿಯೊಗಳನ್ನು ಮಾಡಬಾರದೆಂದು ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಆದಾಗ್ಯೂ, ಅದನ್ನೇ ಲಂಘಿಸಿ ಎರಡನೇ ವಿಡಿಯೊ ಪ್ರಕಟಿಸಿರುವುದರಿಂದ, ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಅವರು ವಿಡಿಯೋವನ್ನು ತಕ್ಷಣ ಡಿಲೀಟ್ ಮಾಡುವಂತೆ ಆದೇಶಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಮಧ್ಯೆ, ಯೂಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.