
ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ.
- ಏಪ್ರಿಲ್ 15ರಂದು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯ ಸಂಭವವಿದೆ.
- ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಹಗುರ ಮಳೆಯಾಗುವ ಸಾಧ್ಯತೆ ಇದೆ.
- ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಧ್ಯಮ ಮಳೆಯಾಗಬಹುದು.
- ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏ.16ರಂದು,
- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
- ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಹಗುರ ಮಳೆ ನಿರೀಕ್ಷೆಯಲ್ಲಿದೆ.
- ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು.
ಏ.17ರಂದು,
- ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯ ಸಾಧ್ಯತೆ ಇದೆ.
- ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಕೆಲವೊಂದು ಸ್ಥಳಗಳಲ್ಲಿ ಮಳೆಯಾಗಬಹುದು.
- ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.18ರಂದು,
- ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು.
- ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.19ರಂದು,
- ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
- ಬೆಳಗಾವಿ, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಹಗುರ ಮಳೆಯ ನಿರೀಕ್ಷೆ ಇದೆ.
- ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗಬಹುದು.
- ಜೊತೆಗೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೂಡ ಕೆಲವೊಂದು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.