
ಮಾರ್ಚ್ ತಿಂಗಳ ಕೊನೆಯ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಾರ್ಚ್ 31 ಮತ್ತು ಏಪ್ರಿಲ್ 1ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ “ಎಲ್ಲೋ ಅಲರ್ಟ್” ಘೋಷಿಸಲಾಗಿದೆ. ಈ ದಿನಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಶುಕ್ರವಾರ, ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡ ಕವಿದ ವಾತಾವರಣ ಉಲಭ್ಯವಿತ್ತು. ರಾತ್ರಿ ವೇಳೆಯಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ ಮುಂಡಾಜೆ, ಕಡಿರುದ್ಯಾವರ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು, ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ಇದೇ ವೇಳೆ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿಯಲ್ಲಿ ಒಣಹವಾಮಾನ ಮುಂದುವರಿಯಲಿದೆ.