August 5, 2025
WEATHER-1-e1679398614299

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಸೇರಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಮತ್ತು ತೀವ್ರ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

IMD ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪಬಹುದು. ಕೆಲವೊಂದು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪೂರ್ವ ಮುಂಗಾರು ಮಳೆಯ ಪ್ರಭಾವದಿಂದ ದಕ್ಷಿಣ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತೀವ್ರತೆ ಕಡಿಮೆಯಾಗಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆಯಾಗಿದ್ದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಬಿಸಿಲು ಮುಂದುವರಿಯಲಿದೆ. ರಾಜ್ಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯ ಪ್ರಕಾರ, ಹಾಸನ, ಕೊಡಗು, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

error: Content is protected !!