
ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರ ದಾಳಿ ಪ್ರಕರಣ: ಎಸ್‌ಪಿಗೆ ಹೈಕೋರ್ಟ್ ನೋಟಿಸ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರಿಂದ ರಾತ್ರಿ ವೇಳೆ ದಾಳಿ ನಡೆದಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಿಲ್ಲೆಯ ಹಿರಿಯ ಆರ್‌ಎಸ್‌ಎಸ್ ಮುಖಂಡ ಯು.ಜಿ. ರಾಧಾ ಅವರ ಉಪ್ಪಿನಂಗಡಿಯಲ್ಲಿರುವ ಮನೆಗೆ ಜೂನ್ 1ರ ರಾತ್ರಿ ಪೊಲೀಸರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವಿಲ್ಲದ ಹೊರತಾಗಿಯೂ ತಮ್ಮನ್ನು ಆರೋಪಿಯಂತೆ ವರ್ತನೆ ಮಾಡಿದ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ ರಾಧಾ, “ನನ್ನ ಖಾಸಗಿತನ ಹಾಗೂ ವ್ಯಕ್ತಿಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಕಾನೂನು ಬಾಹಿರವಾಗಿ ನನ್ನ ಮೇಲೆ ದಾಳಿ ನಡೆಸಲಾಗಿದೆ,” ಎಂದು ದೂರಿದ್ದರು. ಹೀಗಾಗಿ, ಹೈಕೋರ್ಟ್ ಎಸ್‌ಪಿಗೆ ನೋಟಿಸ್ ನೀಡಿ, ದಾಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದೆ. ಅಲ್ಲದೇ, ಯಾವುದೇ ಕಾನೂನು ವಿರೋಧಿ ಕ್ರಮ ಕೈಗೊಳ್ಳಬಾರದು ಎಂದು ಕಠಿಣ ಸೂಚನೆ ನೀಡಿದೆ.