
ವಿಟ್ಲ: 2015ರಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಿಹಾರ ರಾಜ್ಯದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂದು ಗುರುತಿಸಲಾಗಿದೆ. 2015ರ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿತ್ತು.
ಪ್ರಕರಣದ ನಂತರ ಬಬ್ಲೂ ಕುಮಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಪರಾರಿಯಾಗಿದ್ದನು. ಹಲವು ವರ್ಷಗಳ ತನಿಖೆಯ ನಂತರ, ವಿಟ್ಲ ಠಾಣಾ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಪ್ರದೇಶದಲ್ಲಿ ಬಬ್ಲೂ ಕುಮಾರನನ್ನು ಪತ್ತೆ ಹಚ್ಚಿ, ಸ್ಥಳೀಯ ಪೊಲೀಸರ ಸಹಕಾರದಿಂದ ಬಂಧಿಸಿ, ಜುಲೈ 13ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.