March 14, 2025
2025-01-22 at 10.58.25 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಪ್ರಸ್ತುತ ಡಾಲರ್ ಎದುರು ₹86,300 ರಂತೆ ವಹಿವಾಟು ನಡೆಸುತ್ತಿದೆ. ಚಿನ್ನದ ದರ ನಿರಂತರ ಏರಿಕೆ ಕಾಣುತ್ತಿದೆ.

ಇಂದಿನ ಬೆಲೆ ಎಷ್ಟಿದೆ?
ದೇಶೀಯ ಮಾರುಕಟ್ಟೆಯಲ್ಲಿ ಜನವರಿ 22 ರಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 75 ರುಪಾಯಿ ಏರಿಕೆ ಆಗಿದೆ. ಹೀಗಾಗಿ ಇಂದಿನ 1 ಗ್ರಾಂ ಬೆಲೆ 7,525 ರೂ ಇದೆ. 24 ಕ್ಯಾರೆಟ್ ಚಿನ್ನದಲ್ಲಿ ಕೂಡಾ ಬರೋಬ್ಬರಿ 86 ರುಪಾಯಿ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ 8,209 ರುಪಾಯಿ ಆಗಿದೆ.

10 ಗ್ರಾಂ ಬೆಲೆ ಎಷ್ಟು?
22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 75,250 ರೂ ಇದ್ದು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 82,090 ರೂ ಇದೆ. ಸೋಮವಾರದಿಂದ ಮಂಗಳವಾರಕ್ಕೆ 860 ರೂ ಏರಿಕೆ ಆಗಿದೆ.