
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಡ್ರೋನ್ನ ಅಜಾಗರೂಕ ಬಳಕೆಯ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಡ್ರೋನ್ ರಥೋತ್ಸವದ ಮೂರ್ತಿಗೆ ಬಡಿದು, ಸಹಾಯಕ ಅರ್ಚಕರ ಮೇಲೆ ಬಿದ್ದಿದೆ. ತಕ್ಷಣವೇ ಎಚ್ಚೆತ್ತ ಸಹಾಯಕ ಅರ್ಚಕರು ಡ್ರೋನ್ ಅನ್ನು ಕಾಲಿನಿಂದ ಒತ್ತು ಹಾಕಿ ಕೆಳಗೆ ಹಾಕಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಡ್ರೋನ್ ಅಪರೇಟರ್ನ ಅಜಾಗರೂಕತೆಯ ವಿರುದ್ಧ ಸ್ಥಳೀಯರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.