August 9, 2025
Yashpal_Suvarna

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿಯ ವಿದ್ಯಾರ್ಥಿಗಳು ಶೇ. 93.90 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಮಹತ್ತ್ವದ ಯಶಸ್ಸಿಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದಿರುವುದು, ಕರಾವಳಿ ಭಾಗದ ಶಿಕ್ಷಣದ ಮಟ್ಟ ಎಷ್ಟು ಉನ್ನತವಾಗಿದೆ ಎಂಬುದನ್ನು ಮತ್ತೊಮ್ಮೆ ಪ್ರತೀತಿಸುತ್ತದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಗೆ ರಾಜ್ಯ ಮಟ್ಟದಲ್ಲಿ ಕೀರ್ತಿ ತಂದ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಾಲಾ ಆಡಳಿತ ಮಂಡಳಿಗಳು, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

error: Content is protected !!