April 29, 2025
BETTING-CASE

ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ಮೂವರು ವ್ಯಕ್ತಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತರು ಕುಂದಾಪುರದ ಕೊರ್ಗಿಯ ಸಂದೀಪ್ (34), ಬೇಳೂರಿನ ಶ್ರೀರಾಜ್ (33) ಮತ್ತು ಮೊಳಹಳ್ಳಿಯ ಮಧುಕರ್ (44) ಎಂದು ಗುರುತಿಸಲಾಗಿದೆ.

ಇವರು ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದರು. ವಿವಿಧ ವ್ಯಕ್ತಿಗಳಿಗೆ ಕರೆ ಮಾಡಿ ತಂಡಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ, ಆಧಾರದ ಮೇಲೆ ಹಣವನ್ನು ಸಂಗ್ರಹಿಸುತ್ತಿದ್ದರು. ಬೆಟ್ಟಿಂಗ್ ಮಾಡಲು ಬಳಸುವ ಅಪ್ಲಿಕೇಶನ್‌ಗಳನ್ನು ಅವರು ಸಂಬಂಧಿತ ವ್ಯಕ್ತಿಗಳ ಮೊಬೈಲ್‌ಗಳಿಗೆ ಡೌನ್‌ಲೋಡ್ ಮಾಡಿಸಿ, ಅವುಗಳ ಮೂಲಕ ಹಣ ವಸೂಲಿ ಮಾಡುತ್ತಿದ್ದರು.

ಪೊಲೀಸರು ಆರೋಪಿಗಳಿಂದ ₹12,16,700 ಮೌಲ್ಯದ ನಗದು, ಕಾರು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಉಡುಪಿ ಸೆನ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

error: Content is protected !!