August 7, 2025
karnatakarainforecastfp-1719817785

ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಆರ್ಭಟ ಕಾಣಿಸಿಕೊಳ್ಳಲಿದೆ ಎಂಬ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಜೂನ್‌ 10ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಆಕಾಶ ಮೋಡ ಕವಿದಂತಿರಲಿದೆ. ಕೆಲವೊಂದು ಕಡೆಗಳಲ್ಲಿ ಬಿರುಗಾಳಿಯ ಜೊತೆಗೆ ಹಗುರದಿಂದ ಮಧ್ಯಮ ಮಟ್ಟದ ಮಳೆ ಹಾಗೂ ಗಾಳಿಗೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 10ರಂದು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 11ರಂದು ಕರಾವಳಿ ಜಿಲ್ಲೆಗಳ ಜೊತೆಗೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದುವರೆದಿದೆ.

ಜೂನ್‌ 12ರಂದು ಕರಾವಳಿ ಭಾಗ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈವೆರಡು ಜಿಲ್ಲೆಗಳ ಹೊರತುಪಡಿಸಿದ ಉಳಿದ ಭಾಗಗಳಿಗೆ ಆರೆಂಜ್ ಅಲರ್ಟ್ ಇರುತ್ತದೆ. ಈ ದಿನಗಳಲ್ಲಿ ಬಿರುಗಾಳಿ ಮತ್ತು ಭಾರಿ ಮಳೆಯ ಸಂಭವ ಹೆಚ್ಚು.

ಜೂನ್‌ 13ರಂದು ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಸೇರಿ 10 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಈ ಭಾಗಗಳಲ್ಲಿ ಭಾರೀ ಮಳೆ ಹಾಗೂ ತೀವ್ರ ಹವಾಮಾನ ವಾತಾವರಣದ ಸಾಧ್ಯತೆ ಇದೆ.

error: Content is protected !!