
ಪುತ್ತೂರು: ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ
ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಜೂನ್ 15ರ ರಾತ್ರಿ ಏಳು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತ ಯುವತಿ ರೇಶ್ಮಾ (28) ಚಿಕ್ಕಪುತ್ತೂರಿನ ನಿವಾಸಿ ಹಾಗೂ ಪುತ್ತಿಲ ಪರಿವಾರದ ಮುಖಂಡರಾದ ಚಿಂತನ್ ಅವರ ಪತ್ನಿಯಾಗಿದ್ದಾರೆ. ಅವರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೂಲತಃ ಸುರತ್ಕಲ್ನವರಾದ ರೇಶ್ಮಾ ನಾಲ್ಕು ವರ್ಷಗಳ ಹಿಂದೆ ಚಿಂತನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಒಬ್ಬ ಪುತ್ರಿಯು ಇದ್ದಾಳೆ. ಕುಟುಂಬವು ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು.
ಘಟನೆ ನಡೆದ ಸಧ್ಯದಲ್ಲೇ ಸ್ಥಳೀಯರು ವಿಷಯವನ್ನು ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.