
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರಿಗೆ ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ, ಅವರು ಅತೀವ ಗಾಯಗೊಂಡು ಬಿದ್ದಿದ್ದಾರೆ. ಈ ವೇಳೆ ಅಡ್ಡಿಯಿಂದ ಬಂದ ಖಾಸಗಿ ಬಸ್ಸಿನ ಚಕ್ರದಡಿಗೆ ಸಿಲುಕಿ ಆಕೆ ತಕ್ಷಣವೇ ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಮಣಿಪಾಲದ ಟಿ ಎಂ ಎ ಪೈ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿನೋದಾ ಶೇರ್ವೆಗಾರ್ ಎಂದು ಗುರುತಿಸಲಾಗಿದೆ. ಅವರು ದಿನವೂ ಕೆಲಸಕ್ಕೆ ಆಗಮಿಸುತ್ತಿದ್ದ ಮಾರ್ಗದಲ್ಲಿಯೇ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳೀಯರು ಬೆಚ್ಚಿಬಿದ್ದು ಕೂಡಲೇ ರಕ್ಷಣೆಗಾಗಿ ಮುಂದಾಗಿದ್ದರು, ಆದರೆ ಅವರೆಗೆ ಬದುಕುಳಿಯಿಸಲು ಸಾಧ್ಯವಾಗಲಿಲ್ಲ.
ಘಟನಾ ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಟೋರಿಕ್ಷಾ ಮತ್ತು ಬಸ್ಸು ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇಂತಹ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆ ನಿಯಮ ಪಾಲನೆ ಹಾಗೂ ಚಾಲಕರ ಜವಾಬ್ದಾರಿ ಮಹತ್ವದ್ದಾಗಿದ್ದು, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆಯಿಂದ ರಸ್ತೆಗಳಲ್ಲಿ ಚಲಿಸಬೇಕಾಗಿದೆ.