
ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವತಿಯ ತಾಯಿ ಸುಜಾತ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
ಅನನ್ಯ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ 2003ರಲ್ಲಿ ಧರ್ಮಸ್ಥಳದ ದೇವಸ್ಥಾನದ ವಠಾರದಿಂದ ಆಕಸ್ಮಿಕವಾಗಿ ಕಾಣೆಯಾಗಿದ್ದರು. ಈ ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಸುಜಾತ ಭಟ್ ಅವರು ಜಿಲ್ಲಾ ಎಸ್ಪಿ ಡಾ. ಅರುಣ್ ಅವರನ್ನ ಭೇಟಿ ಮಾಡಿ ಪ್ರಕರಣವನ್ನು ಪುನರ್ ತನಿಖೆಗೆ ಒಳಪಡಿಸುವಂತೆ ವಿನಂತಿಸಿದ್ದಾರೆ.
ಈ ಸಂಬಂಧ ಪ್ರಾಥಮಿಕ ತನಿಖೆ ಕೈಗೊಳ್ಳಲಾಗುತ್ತಿದ್ದು, ಅಗತ್ಯವಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.