
ಮಲ್ಪೆ ಸಮುದ್ರ ತೀರದಲ್ಲಿ ಪತ್ತೆಯಾದ ಯುವಕನ ಶವವನ್ನು ಗದಗದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಘಟನಾಸ್ಥಳಕ್ಕೆ ತಲುಪಿ, ಶವವನ್ನು ಆಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಶವಪರೀಕ್ಷೆಗೆ ವ್ಯವಸ್ಥೆ ಮಾಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ತನಿಖೆ ಪ್ರತೀಕ್ಷಿಸಲಾಗಿದೆ.