
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ತಿಲಕ್ ವರ್ಮ (72 ರನ್) ಅವರ ಅಬ್ಬರದ ಅರ್ಧ ಶತಕದ ನೆರವಿನಿಂದ ಭಾರತ ತಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 166 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಭಾರತ, ನಾಲ್ಕು ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್ ಕಳೆದುಕೊಂಡು ಗುರಿ ಭೇದಿಸಿತು. ತಿಲಕ್ ವರ್ಮಾ ಅಜೇಯರಾಗಿ ಉಳಿದರು. ಈ ಮೂಲಕ ಟಿ20 ಕ್ರಿಕೆಟ್ ಔಟಾಗದೆ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆಗೆ ಪಾತ್ರರಾದರು.