April 20, 2025
pbks-rcb

ಈಗಾಗಲೇ ತವರಿನಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮತ್ತೊಂದು ತವರಿನ ಪಂದ್ಯದಲ್ಲಿ ಆಸೆಪಟ್ಟು ಕಣಕ್ಕಿಳಿಯಲಿದೆ.

ಇದೆ ತನಕ 6 ಪಂದ್ಯಗಳಲ್ಲಿ ತಲಾ 4 ಗೆಲುವು ಗಳಿಸಿದ RCB ಮತ್ತು ಪಂಜಾಬ್ ತಂಡಗಳು 8 ಅಂಕಗಳನ್ನು ಹೊಂದಿದ್ದು, ನೆಟ್ ರನ್‌ರೇಟ್ ಆಧಾರದ ಮೇಲೆ RCB ಮೂರನೇ ಸ್ಥಾನದಲ್ಲಿದೆ, ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ.

ಇದುವರೆಗೆ IPL ಇತಿಹಾಸದಲ್ಲಿ RCB ಹಾಗೂ ಪಂಜಾಬ್ ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್ 17 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, RCB 16 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಪಂಜಾಬ್ 2022ರಲ್ಲಿ ಕೊನೆಯ ಬಾರಿ RCB ವಿರುದ್ಧ ಜಯ ಸಾಧಿಸಿತ್ತು. ಇತ್ತೀಚಿನ ಎರಡು ವರ್ಷಗಳಲ್ಲಿ ಪಂಜಾಬ್‌ ಗೆಲುವು ನೋಂದಾಯಿಸಿಲ್ಲ.

RCB ತನ್ನ ಆಟಗಾರರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಕಳೆದ ಪಂದ್ಯದಲ್ಲಿ ಆಡಿದ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್ ಮತ್ತು ಜೋಶ್ ಹ್ಯಾಜಲ್‌ವುಡ್ ಮತ್ತೆ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕೊಲ್ಕತಾ ವಿರುದ್ಧ 111 ರನ್‌ಗಳನ್ನು ರಕ್ಷಿಸಿ ಶ್ರೇಷ್ಠ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್ ತಂಡವೂ ತಮ್ಮ ಆಟಗಾರರ ಸಂಯೋಜನೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷ್‌ದೀಪ್ ಸಿಂಗ್, ಯಜುವೇಂದ್ರ ಚಾಹಲ್ ಹಾಗೂ ಸೂರ್ಯಾಂಶ್ ಶೆಡ್ಜ್ ಅಂಗಳಕ್ಕಿಳಿಯುವ ನಿರೀಕ್ಷೆ ಇದೆ.

error: Content is protected !!