
ಉಡುಪಿ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಹಾಗೂ ಗ್ರಾಮ ಪಂಚಾಯಿತಿ ಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್ ನಲ್ಲಿ ಅನುದಾನ ಮಿಸಲಿರಿಸಿ, ಅವುಗಳ ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ
ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರು ಸೂಚನೆ ನೀಡಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.