
ಕಾರ್ಕಳ: ಕಳೆದ ವರ್ಷ ಅಕ್ಟೋಬರ್ 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣದಲ್ಲಿ ಪತ್ನಿ ಪ್ರತೀಮಾ (36) ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತೀಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಈ ಕೊಲೆ ನಡೆಸಿದ್ದಾರೆ ಎಂಬ ಆರೋಪದಂತೆ ಅಜೆಕಾರು ಪೊಲೀಸರು ಇಬ್ಬರನ್ನೂ ಅಕ್ಟೋಬರ್ 25ರಂದು ಬಂಧಿಸಿದ್ದರು. ಈ ಸಂಬಂಧ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಪೊಲೀಸರು ಆರೋಪಪತ್ರ ಸಲ್ಲಿಸಿದ್ದರು.
ಇತ್ತೀಚೆಗೆ ರಾಜ್ಯ ಹೈಕೋರ್ಟ್ ಪ್ರಕರಣದ ವಿಚಾರಣೆಯ ನಂತರ, ಪ್ರತೀಮಾಳಿಗೆ ನಿಗದಿತ ಷರತ್ತುಗಳಡಿ ಜಾಮೀನು ನೀಡಿದೆ. ಕೆಲ ತಿಂಗಳುಗಳ ಹಿಂದೆಯೇ ಆರೋಪಿ ದಿಲೀಪ್ ಹೆಗ್ಡೆ ಕೂಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.