
ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಳಿಸಲಾಗಿದೆ. ರೆಹಮಾನ್ ಅವರಿಗೆ ಚೆನ್ನೈನ ಅಪೋಲೊ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಆಸ್ಕರ್ ವಿಜೇತ, ಭಾರತ ಸಿನಿಮಾ ಸಂಗೀತ ಕ್ಷೇತ್ರದ ದಿಗ್ಗಜ ಎಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಲಭ್ಯವಿರುವ ಮಾಹಿತಿಯ ಪ್ರಕಾರ ಎಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7:30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.