

ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ‘ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ. ನಾನು ಮಧ್ಯಪ್ರಾಚ್ಯದಲ್ಲಿ ಅವ್ಯವಸ್ಥೆಯನ್ನು ನಿಲ್ಲಿಸುತ್ತೇನೆ ಮತ್ತು ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ’ ಎಂದು ಹೇಳಿದ್ದಾರೆ. ಗಡಿಗಳ ಮೇಲೆ ನಾವು ಶೀಘ್ರವಾಗಿ ನಿಯಂತ್ರಣವನ್ನು ಮರು ಸ್ಥಾಪಿಸುತ್ತೇವೆ ಎಂದು ಟ್ರಂಪ್ ಹೇಳಿದರು.
ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನಾದಿನದಂದು ವಿಜಯೋತ್ಸವದಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವುದಾಗಿ ಮತ್ತು ಪಶ್ಚಿಮ ಏಷ್ಯಾದಲ್ಲಿನ ಅವ್ಯವಸ್ಥೆಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದರು. ಗಡಿಗಳ ಮೇಲೆ ನಾವು ಶೀಘ್ರವಾಗಿ ನಿಯಂತ್ರಣವನ್ನು ಮರು ಸ್ಥಾಪಿಸುತ್ತೇವೆ ಎಂದು ಟ್ರಂಪ್ ಹೇಳಿದರು.